ಕೋಡಗನ ಕೋಳಿ ನುಂಗಿತ್ತ
ಕೇಳವ್ವ ತಂಗಿ
ಕೋಡಗನ ಕೋಳಿ ನುಂಗಿತ್ತ
ಆಡು ಆನೆಯ ನುಂಗಿ
ಗೋಡೆ ಸುಣ್ಣವ ನುಂಗಿ
ಆಡಲು ಬಂದ ಪಾತಾರದವಳ ಮದ್ದಿಲೆ ನುಂಗಿತ್ತ!
ಒಳ್ಳು ಒನಕೆಯ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಲ್ಲಿರುವ ಅಣ್ಣನನ್ನೇ ಮನೆಯ ನುಂಗಿತ್ತ!
ಹಗ್ಗ ಮಗ್ಗವ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಲ್ಲಿರುವ ಅಣ್ಣನನ್ನೆ ಮಣಿಯು ನುಂಗಿತ್ತ!
ಗುಡ್ಡ ಗವಿಯನ್ನು ನುಂಗಿ
ಗವಿಯು ಇರುವೆಯ ನುಂಗಿ
ಗೋವಿಂದ ಗುರುವಿನ ಪಾದ ನನ್ನನ್ನೇ ನುಂಗಿತ್ತ -ತಂಗಿ
ಕೋಡಗನ ಕೋಳಿ ನುಂಗಿತ್ತ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ